ಕರಿಕೆ:ಕರಿಕೆ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರಿಗೆ ಅಭಿನಂದನಾ ಸಮಾರಂಭ ಕರಿಕೆ ಎಳ್ಳುಕೊಚ್ಚಿಯಲ್ಲಿ ನಡೆಯಿತು.ಕರಿಕೆ ವಲಯ ಕಾಂಗ್ರೆಸ್ ಅಧ್ಯಕ್ಷ ಬೇಕಲ್ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಡಿಸಿಸಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅರುಣ್ ಮಾಚಯ್ಯ, ಕಾಂಗ್ರೆಸ್
ಕೊಡಗು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ನಾಪೊಕ್ಲು ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಕೊಡಗು ಕಾನೂನು ಘಟಕದ ಅಧ್ಯಕ್ಷ ಶ್ರೀಧರನ್ ನಾಯರ್, ಕೆಪಿಸಿಸಿ ಸದಸ್ಯ ರಮಾನಾಥ್ ಬಿ.ಎಸ್, ಡಿಸಿಸಿ ಸದಸ್ಯರಾದ ಬಾಲಚಂದ್ರನ್ ನಾಯರ್, ಕರಿಕೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಲ್ಪನಾ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.
ವಿವಿಧ ಬೇಡಿಕೆಗಳ ಮನವಿ;
ಶಾಸಕರಿಗೆ ವಿವಿಧ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು.ಮಡಿಕೇರಿ- ಭಾಗಮಂಡಲ-ಕರಿಕೆ-ಸುಳ್ಯ- ಸುಬ್ರಹ್ಮಣ್ಯ-ಧರ್ಮಸ್ಥಳ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಸರ್ವೀಸ್ ಆರಂಭಿಸಬೇಕು. ಮಡಿಕೇರಿ-ಕರಿಕೆ- ಭಾಗಮಂಡಲ-ಕಾಞಂಗಾಡ್- ಪರಶ್ಶಿನಿಕಡವ್ ಮಾರ್ಗದಲ್ಲಿ ಬಸ್ ಸೇವೆ ಆರಂಭಿಸಬೇಕು, ಕರಿಕೆಯಿಂದ-ಬೆಂಗಳೂರಿಗೆ ರಾತ್ರಿ ಬಸ್ ಆರಂಭಿಸಬೇಕು, ಮೊಬೈಲ್ ಟವರ್ ಸ್ಥಾಪಿಸಬೇಕು, ಗಡಿಪ್ರದೇಶವಾದ ಚೆಂಬೇರಿಯಲ್ಲಿ ಬಸ್ ನಿಲ್ದಾಣ ಸ್ಥಾಪಿಸಬೇಕು, ಎಳ್ಳುಕೊಚ್ಚಿಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕು, ಹಕ್ಕುಪತ್ರ ವಿತರಿಸಬೇಕು ಎಂದು ಮನವಿಯಲ್ಲಿ ವಿನಂತಿಸಲಾಯಿತು.