ಕರಿಕೆ:ಕರಿಕೆ ಮಂಞಡುಕ್ಕ ಶ್ರೀ ತುಳೂರ್ ವನತ್ ಭಗವತಿ ಕ್ಷೇತ್ರದ ಕಳಿಯಾಟ ಮಹೋತ್ಸವಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಭೇಟಿ ನೀಡಿದರು. ಶುಕ್ರವಾರ ಬೆಳಿಗ್ಗೆ ಆಗಮಿಸಿ ಕ್ಷೇತ್ರ ದರ್ಶನ ಪಡೆದ ಅವರು
ಜಾತ್ರೋತ್ಸವ ವೀಕ್ಷಿಸಿದರು. ಈ ಸಂದರ್ಭದಲ್ಲಿ ಪೊನ್ನಣ್ಣ ಅವರು ಕ್ಷೇತ್ರದಲ್ಲಿ ತುಲಾಭಾರ ಸೇವೆ ನೆರವೇರಿಸಿದರು. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪೊನ್ನಣ್ಣ ಗೆಲುವಿಗಾಗಿ ತುಲಾಭಾರ ಸೇವೆ ಹರಕೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಪೊನ್ನಣ್ಣ ಅವರು ಆಗಮಿಸಿ ತುಲಾಭಾರ ಸೇವೆ ನೆರವೇರಿಸಿದರು.
ಕರಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್, ಎನ್. ಶ್ರೀಧರನ್ ನಾಯರ್, ರಮಾನಾಥ್ ಬೇಕಲ್, ಕ್ಷೇತ್ರ ಆಡಳಿತ ಮೊಕ್ತೇಸರರಾದ ಕಾಟೂರು ತಂಬಾನ್ ನಾಯರ್, ಕಾಟೂರು ವಿದ್ಯಾಧರನ್ ನಾಯರ್ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಕರಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅವರು ಚಾಲನೆ ನೀಡಿದರು. ಜನಪ್ರತಿನಿಧಿಗಳು
ಮುಖಂಡರು ಉಪಸ್ಥಿತರಿದ್ದರು.









