ಸುಳ್ಯ:ಸುಳ್ಯ ನಗರ ಪಂಚಾಯತ್ ಪೌರ ಸೇವಾ ನೌಕರರ ಸಂಘದ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಸುಳ್ಯ ನಗರ ಪಂಚಾಯತ್ ವತಿಯಿಂದ ಕ್ರೀಡಾಕೂಟ ಸುಳ್ಯದ
ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆಯಿತು.ಸುಳ್ಯ ತಹಶೀಲ್ದಾರ್ ಹಾಗು ನಗರ ಪಂಚಾಯತ್ ಆಡಳಿತಾಧಿಕಾರಿ ಮಂಜುಳಾ.ಎಂ ಉದ್ಘಾಟಿಸಿದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ. ಮುಸ್ತಫ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ನ.ಪಂ. ಮುಖ್ಯಾಧಿಕಾರಿ ಬಸವರಾಜ್, ಸಹಾಯಕ ಇಂಜಿನಿಯರ್ ವೆಂಕಟೇಶ್, ಒ.ಎಸ್.ತಿಮ್ಮಪ್ಪ ಮೊದಲಾದವರು ಉಪಸ್ಥಿತರಿದ್ದರು. ಸುದೇವ ಸ್ವಾಗತಿಸಿ, ವಂದಿಸಿದರು.








