ಸುಳ್ಯ:ಸುಳ್ಯ ನಗರ ಪಂಚಾಯತ್,ಕರ್ನಾಟಕ ಪೌರ ಸೇವಾ ನೌಕರರ ಸಂಘದ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ ಸುಳ್ಯ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಸುಳ್ಯ ತಹಶೀಲ್ದಾರ್ ಹಾಗು ನಗರ ಪಂಚಾಯತ್ ಆಡಳಿತಾಧಿಕಾರಿ ಮಂಜುಳಾ ಎಂ. ಉದ್ಘಾಟಿಸಿದರು. ನಗರ ಪಂಚಾಯತ್
ಮುಖ್ಯಾಧಿಕಾರಿ ಬಸವರಾಜ್ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ. ಎಂ.ಮುಸ್ತಫ ಪೌರ ಕಾರ್ಮಿಕರನ್ನು ಮತ್ತು ನೇರ ಪಾವತಿ ಪಡೆಯುವ ಕಾರ್ಮಿಕರನ್ನು ಸನ್ಮಾನಿಸಿದರು.
ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ್ ಲಸ್ರಾದೊ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನಾರಾಯಣ ಭಾಗವಹಿಸಿದ್ದರು.ವೇದಿಕೆಯಲ್ಲಿ ಪೌರ ಕಾರ್ಮಿಕರ ಮೇಲುಸ್ತುವಾರಿ ಒ.ಎಸ್.ತಿಮ್ಮಪ್ಪ ಉಪಸ್ಥಿತರಿದ್ದರು.
ನಗರ ಪಂಚಾಯತ್ ಕಂದಾಯ ನಿರೀಕ್ಷಕ ಸುದೇವ ಸ್ವಾಗತಿಸಿ, ಎಸ್ಜೆಎಸ್ಆರ್ವೈ ಸಮುದಾಯ ಸಂಘಟಕಿ ಜಯಲಕ್ಷ್ಮಿ ವಂದಿಸಿದರು.
ದಿಲೀಪ್ ಕಾರ್ಯಕ್ರಮ ನಿರೂಪಿಸಿದರು.ವಿವಿಧ ಸ್ಪರ್ಧೆಗಳಲ್ಲು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.







