ಸುಳ್ಯ: ಮೇ.19 ಮಂಗಳವಾರ ಸುಳ್ಯದಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಪಮ್ಮಿಕೊಂಡಿರುವುದರಿಂದ 11ಕೆ.ವಿ ಅಜ್ಜಾವರ ಮತ್ತು ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.














