ಸುಳ್ಯ: 33 ಕೆ.ವಿ. ಕಾವು-ಸುಳ್ಯ ಏಕ ಪಥ ಮಾರ್ಗವನ್ನು ಕೌಡಿಚ್ಚಾರಿನಿಂದ ಕಾವು ಜಂಕ್ಷನ್ವರೆಗೆ ದ್ವಿ ಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿ ಡಿ.24 ಮಂಗಳವಾರದಂದು ನಡೆಸುವುದರಿಂದ ಬೆಳಿಗ್ಗೆ 9:30 ಗಂಟೆಯಿಂದ ಸಂಜೆ 5:00 ಗಂಟೆವರೆಗೆ 33/11 ಕೆ.ವಿ ಕಾವು ಹಾಗೂ ಸುಳ್ಯ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.