ಸುಳ್ಯ: ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ
ಡಿ.27ರಂದು ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 5ರ ತನಕ ವಿದ್ಯುತ್ ಕಡಿತ ಉಂಟಾಗಲಿದೆ. 11 ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವಾರ, ಉಬರಡ್ಕ, ಕಲ್ಲು ಗುಂಡಿ, ಮಂಡೆಕೋಲು ಫೀಡರುಗಳಲ್ಲಿವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.







