ಸುಳ್ಯ:ತುರ್ತು ನಿಯತಕಾಲಿಕ ನಿರ್ವಹಣೆಯ ಹಿನ್ನಲೆಯಲ್ಲಿ ಸುಳ್ಯ ಉಪವಿಭಾಗದಲ್ಲಿ ಜ.31ರಂದು ಶನಿವಾರ ದಿನಪೂರ್ತಿ ವಿದ್ಯುತ್ ಕಡಿತ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ
11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿದೆ. ಇದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ರಿಂದ ಸಙಜೆ 5ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ. ಈ ವಾರದಲ್ಲಿ ಎರಡನೇ ಬಾರಿ ದಿನಪೂರ್ತಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ಮಂಗಳವಾರ ದಿನಪೂರ್ತಿ ವಿದ್ಯುತ್ ಕಡಿತ ಮಾಡಲಾಗಿತ್ತು. ಬೆಳಿಗ್ಗೆ 10ಗಂಟೆಯಿಂದ ರಾತ್ರಿ 9ಗಂಟೆಯ ತನಕ ವಿದ್ಯುತ್ ಕಡಿತಗೊಂಡಿತ್ತು.





