ಸುಳ್ಯ:ನಾಳೆ(ಜು.22) ಮಂಗಳವಾರ ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತವಾಗಲಿದೆ. 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು
ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.





