ಸುಳ್ಯ:ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ
ನ.25ರಂದು ಮಂಗಳವಾರ ಬೆಳಿಗ್ಗೆ 10 ರಿಂದ ಸಂಜೆ 6ರ ತನಕ ವಿದ್ಯುತ್ ಕಡಿತವಾಗಲಿದೆ. 11ಕೆವಿ ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.





