ಸುಳ್ಯ:ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಮಾ.5 ಗುರುವಾರದಂದು 33/11 ಕೆ.ವಿ. ಗುತ್ತಿಗಾರು ವಿದ್ಯುತ್ ವಿತರಣಾ ಕೇಂದ್ರದಿಂದ ಮತ್ತು ಸುಬ್ರಹ್ಮಣ್ಯ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ
ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11 ಕೆ.ವಿ ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 5 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.









