ಸುಳ್ಯ:ಸೆ.30 ಬುಧವಾರ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ಮತ್ತು ಬೆಳ್ಳಾರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ‘C’ type wedge connection ಅಳವಡಿಕೆ, ಹಾಗೂ
ಎಲ್ಲ 11 ಕೆ.ವಿ. ಫೀಡರುಗಳಲ್ಲಿ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ- ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು, ಬೆಳ್ಳಾರೆ-1, ಬೆಳ್ಳಾರೆ -2 ನೆಟ್ಟಾರು, ಕಳಂಜ, ಮುರುಳ್ಯ, ಪೆರ್ಲಂಪಾಡಿ, ಚೊಕ್ಕಾಡಿ ಫೀಡರುಗಳಲ್ಲಿ ಸೆ.30ರಂದು ಬೆಳಿಗ್ಗೆ 10ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.








