ಸುಳ್ಯ:ನಾಳೆ(ನ.24ರಂದು) ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11ಕೆ.ವಿ. ಫೀಡರುಗಳಲ್ಲಿ
ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ- ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೊ ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6ರ ರತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಪ್ರಕಟಣೆ ತಿಳಿಸಿದೆ.















