ಸುಳ್ಯ: ನಿಯತಕಾಲಿಕ ನಿರ್ವಹಣಾ ಕೆಲಸ ಇರುವುದರಿಂದ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಅ.7 ರಂದು ಶನಿವಾರ ವಿದ್ಯುತ್ ಕಡಿತ ಆಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳಲ್ಲಿ
ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಲೊ, ತೋಡಿಕಾನ, ಕೊಲ್ದಾರ್, ದೇವರಗುಂಡ, ಅಜ್ಞಾವಾರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.