ಸುಳ್ಯ:ಸುಳ್ಯ ಉಪ ವಿಭಾಗದ ವಿವಿಧ ಭಾಗಗಳಲ್ಲಿ ಏ.7 ಮಂಗಳವಾರದಂದು ವಿದ್ಯುತ್ ಕಡಿತವಾಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ
ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ ಡಿಪ್ಪೋ, ಸಂಪಾಜೆ, ಕೊಲ್ಚಾರ್, ಕಾವು, ಅಜ್ಜಾವರ, ಕೇನ್ಯ, ಆರಂತೋಡು, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 6ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.









