ಸುಳ್ಯ: ಮೇ.20 ರಂದು ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿನ 5ಎಂ.ವಿ.ಎ ಶಕ್ತಿ ಪರಿವರ್ತಕದ ತೈಲ ಶುದ್ದೀಕರಣದ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸಂಪಾಜೆ, ಕೊಲ್ಚಾರ್, ಅರಂತೋಡು, ಫೀಡರುಗಳಲ್ಲಿ ಮೇ.20 ರಂದು ಬೆಳಿಗ್ಗೆ 10 ರಿಂದ ಸಾಯಂಕಾಲ 6 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸುಳ್ಯ ಮೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.