ಸುಬ್ರಹ್ಮಣ್ಯ:ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು.
ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಅಧಿಕಾರಿಗಳು ಸ್ವಾಗತಿಸಿ, ಶಾಲು ಹೊಂದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.