ಪಂಜ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಪಂಜ-ವಲಯ ಇದರ ಕೂತ್ಕುಂಜ, ಕೇನ್ಯ, ಐವತ್ತೊಕ್ಲು ಪ್ರಗತಿ ಬಂದು ಸ್ವಸಹಾಯ ಸಂಘಗಳ ನೂತನ ಒಕ್ಕೂಟಗಳ ಪದಗ್ರಹಣ ಸಮಾರಂಭ ಪಂಜ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಜರುಗಿತು. ಪ್ರಗತಿ ಪರ ಕೃಷಿಕ ಕುಶಾಲಪ್ಪ ಗೌಡ ದೊಡ್ಡಮನೆ ಉದ್ಘಾಟಿಸಿದರು. ಪ್ರಗತಿ ಬಂಧು ಸ್ವಸಹಾಯ ಸಂಘಗಳ
ಒಕ್ಕೂಟ ಪಂಜ ವಲಯ ಅಧ್ಯಕ್ಷ ಧರ್ಮಪಾಲ ಕಣ್ಕಲ್ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಯೋಜನಾಧಿಕಾರಿ ಮಾಧವ ಗೌಡ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೇಮಿರಾಜ ಪಲ್ಲೋಡಿ ,ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ವೆಂಕಪ್ಪ ಗೌಡ, ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ನಿಕಟ ಪೂರ್ವ ರಾಜ್ಯಾಧ್ಯಕ್ಷ
ಬಾಲಕೃಷ್ಣ ಪುತ್ಯ ,ಸುಳ್ಯ ತಾಲೂಕು ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ದೇವಿಪ್ರಸಾದ್ ಚಿಕ್ಮುಳಿ ಪಾಲ್ಗೊಂಡಿದ್ದರು.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಪಂಜ ವಲಯ ಅಧ್ಯಕ್ಷ ಮೊನಪ್ಪ ಗೌಡ ಬೊಳ್ಳಾಜೆ,ಸುಳ್ಯ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸ್ಥಾಪಕಾಧ್ಯಕ್ಷ ಅಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಪಂಜ ವಲಯ ಅಧ್ಯಕ್ಷ ಪ್ರಕಾಶ್ ನರಿಯಂಗ,ಕೇನ್ಯ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ನಿಕಟ ಪೂರ್ವ ಅಧ್ಯಕ್ಷ ವಿಠಲ ರೈ,ಸುಳ್ಯ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕ ಕ್ಯಾಪ್ಟನ್ ಗಣೇಶ್ ರೈ,ಶೌರ್ಯ ವಿಪತ್ತು ನಿರ್ವಹಣಾ ಘಟಕ ಪಂಜ ವಲಯ ಘಟಕ ಪ್ರತಿನಿಧಿ ವಿಶ್ವನಾಥ ಸಂಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿಯಾದ ವೀಣಾ ಸ್ವಾಗತಿಸಿದರು.ವಲಯದ ಮೇಲ್ವಿಚಾರಕರಾದ ಮಮತಾ ವರದಿ ವಾಚಿಸಿ ವಂದಿಸಿದರು ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.








