ಸುಳ್ಯ:ಪ್ರಜಾಧ್ವನಿ ಕರ್ನಾಟಕ,ಪ್ರಜ್ಞಾವಂತ ಭಾರತ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ಇದರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಸಂವಾದ ಕಾರ್ಯಕ್ರಮ ಶಾರದಾ ಪ್ರೌಢ ಶಾಲೆಯ ಆವರಣದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ
ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪ್ರಜಾಧ್ವನಿ ಕರ್ನಾಟಕ ಸಂಸ್ಥೆಯ ಅಧ್ಯಕ್ಷರಾದ ಪ್ರವೀಣ್ ಮುಂಡೋಡಿ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಭಾಷಣಕಾರರಾಗಿ ರಾಘವೇಂದ್ರ ಹಾಲ್ಕೆರೆ ತುಮರಿ ಭಾಗವಹಿಸಿದ್ದರು. ಕರ್ನಾಟಕ ಸರ್ಕಾರದ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ನಿರ್ದೇಶಕರಾದ ಕೆ.ಪಿ.ಜಾನಿ ಕಲ್ಲುಗುಂಡಿ ಪ್ರಜಾಧ್ವನಿ ಕರ್ನಾಟಕ ಸಂಘಟನೆಯ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ತಾಲೂಕು ಮಟ್ಟದ
ಪ್ರಬಂಧ ಸ್ಪರ್ಧೆಯಲ್ಲಿ ಮರ್ಕಂಜ ಸರಕಾರಿ ಪ್ರೌಢಶಾಲೆಯ ಅನಘ ಎಂ. ಪ್ರಥಮ ಸ್ಥಾನ ಗಳಿಸಿದರೆ, ಎಣ್ಮೂರು ಸರಕಾರಿ ಪ್ರೌಢಶಾಲೆಯ ತನಿಷಾ ಪಿ. ದ್ವಿತೀಯ ಸ್ಥಾನ ಹಾಗೂ ಅಜ್ಜಾವರ ಸರಕಾರಿ ಪ್ರೌಢಶಾಲೆಯ ಮಾನ್ಯ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕಿ ಚಂದ್ರಮತಿ, ಶಾರದಾ ಹೈಸ್ಕೂಲು ಶಿಕ್ಷಕಿ ಭವ್ಯ, ಕಾಲೇಜು ಉಪನ್ಯಾಸಕಿ ಗಾಯತ್ರಿ ತೀರ್ಪುಗಾರರಾಗಿದ್ದರು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಮಲ ರಾಮಚಂದ್ರ,ಶಾರದಾ ಕಾಲೇಜಿನ ಪ್ರಾಂಶುಪಾಲೆ ಸ್ವರ್ಣಕಲಾ,ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಭಾರತಿ, ತಾಲೂಕು ಶಿಕ್ಷಣ ಸಂಯೋಜಕ ಉದಯ ಕುಮಾರ್ ಹಾಗೂ ಶಾಲಾ ವಿದ್ಯಾರ್ಥಿ ನಾಯಕ-ನಾಯಕಿಯರು ಉಪಸ್ಥಿತರಿದ್ದರು. ಪ್ರಜಾಧ್ವನಿ ಕರ್ನಾಟಕ ತಂಡದ ಪ್ರಮುಖರಾದ ಗೋಪಾಲ್ ಪೆರಾಜೆ, ವಸಂತ ಪೆಲ್ತಡ್ಕ, ಮಹಮದ್ ಕುಂಞಿ ಗೂನಡ್ಕ, ಮೋಹನ್ ಕೆ. ಪಿ., ಶಿವಶಂಕರ್ ಕಡಬ, ಮಂಜುನಾಥ್ ಮಡ್ತಿಲ, ಕೇಶವ ಪಾಟಾಳಿ, ಇಬ್ರಾಹಿಮ್ ಎ. ಕೆ., ಮಹೇಶ್ ಬೆಳ್ಳಾರ್ಕರ್, ಭರತ್ ಕುಕ್ಕುಜಡ್ಕ, ಪ್ರಮೀಳಾ ಪೆಲ್ತಡ್ಕ, ಲಕ್ಷ್ಮೀಶ ಗಬ್ಲಡ್ಕ, ಚೆನ್ನಕೇಶವ ಚೊಕ್ಕಾಡಿ, ದಿವಾಕರ ಪೈ ಅರಂಬೂರು, ಫಿಲೋಮಿನ ಕ್ರಾಸ್ತ, ಲಲನ ಕೆ. ಆರ್., ಗಿರಿಯಪ್ಪ ಗೌಡ ಬಿಳಿನೆಲೆ, ಲೂಕಾಸ್ ಟಿ. ಐ. ಹಾಗೂ ಅಶ್ರಫ್ ಸಾಹುಕಾರ್ ಉಪಸ್ಥಿತರಿದ್ದರು.





































