ಸುಳ್ಯ:ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ‘ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಆಯೋಜಿಸುವ ಪ್ರಜಾಸೇವೆ ಅಭಿಯಾನ ಸಭೆಗಳು ಆರಂಭಗೊಂಡಿದೆ. ಸುಳ್ಯ ಹೋಬಳಿ ಮಟ್ಟದ
ಪ್ರಜಾಸೇವೆ ಅಭಿಯಾನ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕಿ ಭಾಗೀರಥಿ ಮುರುಳ್ಯ ದೀಪ ಬೆಳಗಿಸಿ ಪ್ರಜಾಸೇವೆ ಅಭಿಯಾನಕ್ಕೆ ಚಾಲನೆ ನೀಡಿದರು.ರಾಜ್ಯ
ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಸುಳ್ಯ ತಹಶೀಲ್ದಾರ್ ಮಂಜುಳ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.










