ಸುಳ್ಯ:ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರತೀ ಜಿಲ್ಲೆಗಳಲ್ಲಿ ಜಿಲ್ಲಾ ‘ಉಸ್ತುವಾರಿ ಸಚಿವರು ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಪ್ರಜಾಸೇವೆ ಅಭಿಯಾನ ಸಭೆಗಳನ್ನು ಆಯೋಜಿಸಲು ಸರ್ಕಾರ ಆದೇಶ ನೀಡಿದೆ. ಸಭೆ ನಡೆಸುವ ಕುರಿತು ಮಾರ್ಗಸೂಚಿಗಳನ್ನು
ನೀಡಲಾಗಿದ್ದು ಪ್ರಜಾ ಸೇವೆ ಅಭಿಯಾನ ಸಭೆಗಳನ್ನು ಸೆ.5ರಿಂದ ರಾಜ್ಯಾದ್ಯಂತ ಪ್ರಾರಂಭಿಸಲಾಗುತ್ತದೆ. ಸುಳ್ಯ ಹೋಬಳಿ ಮಟ್ಟದ ಪ್ರಜಾಸೇವೆ ಅಭಿಯಾನ ಸಭೆ ಸೆ.5ರಂದು ಪೂ.11.30ಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಮಂಡಿಸಬಹುದು ಎಂದು ಸುಳ್ಯ ತಾಲೂಕು ಕಚೇರಿ ಪ್ರಕಟಣೆ ತಿಳಿಸಿದೆ.










