ಬೆಂಗಳೂರು: ‘ಲೈಂಗಿಕ ದೌರ್ಜನ್ಯ ಆರೋಪದಡಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ತಡರಾತ್ರಿ ಬಂಧಿಸಿದ್ದಾರೆ. ಲೋಕಸಭಾ ಚುನಾವಣೆಯ ಮತದಾನದ ನಂತರ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್, 34 ದಿನಗಳ ಬಳಿಕ ಜರ್ಮನಿಯಿಂದ
ನಗರದ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ 12.50 ಗಂಟೆಗೆ ಸುಮಾರಿಗೆ ಬಂದಿಳಿದರು. ನಿಲ್ದಾಣದಲ್ಲಿ ಮೊಕ್ಕಾಂ ಹೂಡಿದ್ದ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ನನ್ನು ಬಂಧಿಸಿದರು.ಪ್ರಕರಣದ ಸಂಬಂಧ ಇತ್ತೀಚೆಗೆ ವಿಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್, ‘ಮೇ 31ರಂದು ಶುಕ್ರವಾರ ಎಸ್ಐಟಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುತ್ತೇನೆ’ ಎಂದು ಹೇಳಿದ್ದರು. ಜರ್ಮನಿಯ ಮ್ಯೂನಿಕ್ ನಗರದ ನಿಲ್ದಾಣದಿಂದ ವಿಮಾನದಲ್ಲಿ ಗುರುವಾರ ಮಧ್ಯಾಹ್ನ ಬೆಂಗಳೂರಿನತ್ತ ಹೊರಟಿದ್ದರು. ತಡರಾತ್ರಿ 12.50 ಗಂಟೆ ಸುಮಾರಿಗೆ ಬೆಂಗಳೂರಿನ ನಿಲ್ದಾಣದ ಟರ್ಮಿನಲ್–2ಕ್ಕೆ ವಿಮಾನ ಬಂದಿಳಿಯಿತು.
ನಿಲ್ದಾಣದಲ್ಲಿ ಹಾಜರಿದ್ದ ಎಸ್ಐಟಿ ಹಿರಿಯ ಅಧಿಕಾರಿಗಳು, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಪ್ರಜ್ವಲ್ ಅವರನ್ನು ವಶಕ್ಕೆ ಪಡೆದು ನಿಲ್ದಾಣದಿಂದ ಹೊರಗೆ ಕರೆತಂದರು.ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯರ ತಪಾಸಣೆ ಮುಕ್ತಾಯಗೊಂಡ ಬಳಿಕ ಪ್ರಜ್ವಲ್ ಅವರನ್ನು ವಿಶೇಷ ವಾಹನದಲ್ಲಿ ಎಸ್ಐಟಿ ಕಚೇರಿಯತ್ತ ಕರೆದೊಯ್ಯ ಲಾಯಿತು.ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.