ಬೆಂಗಳೂರು:ಪ್ರಜ್ವಲ್ ರೇವಣ್ಣ ಅವರನ್ನು ಹಾಸನ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. 2019 ಲೋಕಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ
ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು
ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ. ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಪ್ರಜ್ವಲ್ ರೇವಣ್ಣ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ.