ಸುಳ್ಯ: ಡಿ. ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಜೂ.3 ರಂದು ಸುಳ್ಯ ತಾಲೂಕಿನ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ,ಮಸೀದಿ ಹಾಗೂ ಚರ್ಚ್ಗಳಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ
ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಲಾಗುವುದು ಅಲ್ಲದೆ ಸಂಜೆ 3.30ರಿಂದ ಸುಳ್ಯದ ಖಾಸಗಿ ಬಸ್ ನಿಲ್ದಾಣದ ಬಳಿ ಎಲ್ ಇ ಡಿ ಪರದೆ ಮೂಲಕ ಪ್ರಮಾಣವಚನದ ನೇರಪ್ರಸಾರ ಕಾರ್ಯಕ್ರಮ ಆಯೋಜಿಸಲಾಗಿದೆ. ದೊಡ್ಡ ಪರದೆಯಲ್ಲಿ ಪ್ರಮಾಣವಚನ ಸಾರ್ವಜನಿಕರಿಗೆ ಪ್ರದರ್ಶಿಸಲಾಗುವುದು.ಡಿಕೆಶಿ ನೇತೃತ್ವದಲ್ಲಿ ಉತ್ತಮ ಆಡಳಿತ ಸಾಧ್ಯವಾಗಲಿ ಎಂದು ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














