ಸುಳ್ಯ: ಮೇ.20 ರಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಮಾರಂಭದಲ್ಲಿ ಭಾಗವಹಿಸಲು ಸುಳ್ಯದ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ. ಪ್ರಮುಖ ಮುಖಂಡರು, ಸುಳ್ಯ ಕ್ಷೇತ್ರದ ನೂರಾರು ಮಂದಿ
ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಕೆಪಿಸಿಸಿ ವಕ್ತಾರ ಟಿ.ಎಂ.ಶಹೀದ್ ತೆಕ್ಕಿಲ್, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ, ಸುಳ್ಯ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ, ಕೆಪಿಸಿಸಿ ಅಲ್ಪ ಸಂಖ್ಯಾತ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಎಂ.ಮುಸ್ತಫ, ಕೆಪಿಸಿಸಿ ಸಂಯೋಜಕ ಎಸ್.ಸಂಶುದ್ದೀನ್, ತಾಲೂಕು ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ,ಅನಿಲ್ ಬಳ್ಳಡ್ಕ ಮತ್ತಿತರರು ಈಗಾಗಲೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದಾರೆ. ಇನ್ನೂ ಹಲವು ಮಂದಿ ಮುಖಂಡರು, ಕಾರ್ಯಕರ್ತರು ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಇಂದು ಕಾಂಗ್ರೆಸ್ ಸಂಭ್ರಮಾಚರಣೆ:
ಪ್ರಮಾಣವಚನದ ಅಂಗವಾಗಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ನಡೆಯಲಿದೆ.ಮೇ.20 ರಂದು ಮಧ್ಯಾಹ್ನ 12 ರಿಂದ ಸುಳ್ಯಖಾಸಗಿ ಬಸ್ಸುನಿಲ್ದಾಣದ ಬಳಿ ಸಂಭ್ರಮಾಚರಣೆ ನಡೆಯಲಿದೆ.
ಕಾರ್ಯಕ್ರಮದ ಮುಂಚಿತವಾಗಿ ಪೂ.11 ಗಂಟೆಗೆ ಸುಳ್ಯದ ಜ್ಯೋತಿ ವೃತ್ತದಿಂದ ಸುಳ್ಯ ನಗರದಲ್ಲಿ ದ್ವಿಚಕ್ರ ವಾಹನ ಜಾಥ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ ಸಿ ಜಯರಾಮ ತಿಳಿಸಿದ್ದಾರೆ.