ಸುಳ್ಯ:ಆರೋಗ್ಯ ಇಲಾಖೆಯ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಟಿ ಅವರಿಗೆ ಸೇವಾ ರತ್ನ ಪ್ರಶಸ್ತಿ ಲಭಿಸಿದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಸಾಧಕರನ್ನು ಗುರುತಿಸುವ ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ಕಂಪೆನಿ ಸೇವಾ ರತ್ನ ಪ್ರಶಸ್ತಿ ನೀಡುತಿದೆ. ಕಂಪೆನಿಯ 330ನೆಯ ಕಾರ್ಯಕ್ರಮದಲ್ಲಿ ಪ್ರಮೀಳಾ ಟಿ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.








