ಸುಳ್ಯ:ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲಿಷ್ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ ಬೊಳುಬೈಲು ಪೀಸ್ ಶಾಲೆಯ ವಿದ್ಯಾರ್ಥಿನಿ ಇಶೆಲ್ ಮರ್ಯಮ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಧಾರ್ಮಿಕ ಪಠಣ ಅರೇಬಿಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಇಶೆಲ್ ದ್ವಿತೀಯ ಸ್ಥಾನ ಪಡೆದಿದ್ದಳು. ಇಶೆಲ್ ಸುಳ್ಯದ ಸಾದಾತ್ ಹೋಲ್ ಸೇಲ್ ಮಾಲಕ ಅಶ್ರಫ್ ಹಾಗೂ ರಂಸೀನಾ ದಂಪತಿಗಳ ಪುತ್ರಿ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post





