ಸುಳ್ಯ:ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯವರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಎರಡು ದಿನಗಳ ಪ್ರತಿಭಾ ಕಾರಂಜಿ ಶುಕ್ರವಾರ ವಿಧ್ಯುಕ್ತವಾಗಿ ಚಾಲನೆಗೊಂಡಿತು.ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು
ಉದ್ಘಾಟಿಸಿ ಮಾತನಾಡಿ ಪ್ರತಿಭಾ ಕಾರಂಜಿ ವಿಧ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಸಹಕಾರಿಯಾಗಿದೆ ಎಂದು ಶುಭ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ನಮಿತ ಎಲ್ ರೈ ವಹಿಸಿದ್ದರು. ವೇದಿಕೆಯಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ , ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ

ಅಧ್ಯಕ್ಷ ಕೆ.ಎಂ ಮುಸ್ತಫ, ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ಭಟ್ ಕುರುಂಬುಡೇಲು , ಕ್ಯಾಂಪ್ಕೊ ನಿರ್ದೇಶಕ ಎ.ವಿ ತೀರ್ಥರಾಮ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಚಂದ್ರಶೇಖರ ಪೇರಾಲು ,ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ, ಕೆ.ಪಿ.ಎಸ್ಸಿ ಪ್ರಾಂಶುಪಾಲ ಜನಾರ್ದನ ಕೆ ಎನ್ , ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಪ್ರತಿಭಾ ಕಾರಂಜಿ ನೋಡೆಲ್ ಅಧಿಕಾರಿ ನಾರಾಯಣ ಬಿ , ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ್ ಕೆ , ಗ್ರಾಮ ಪಂಚಾಯತ್ ಸದಸ್ಯೆ ಎಂ.ನಸೀಮ ಇತರರು ಉಪಸ್ಥಿತರಿದ್ದರು. ಕೆಪಿಎಸ್ಸಿ ಉಪ ಪ್ರಾಂಶುಪಾಲೆ ಉಷಾಕುಮಾರಿ ಸ್ವಾಗತಿಸಿ ದಿನೇಶ್ ಮಾಚಾರ್ ಮತ್ತು ಸವಿತಾ ಗುಜರನ್ ನಿರೂಪಿಸಿ ಜಿ.ಮಾಯಿಲಪ್ಪ ವಂದಿಸಿದರು.












