ಪಂಜ: ಜೆಡಿಎಸ್ ಮುಖಂಡ ಪ್ರವೀಣ್ ಮುಂಡೋಡಿ ಕಾಂಗ್ರೆಸ್ ಸೇರ್ಪಡೆಯಾದರು. ಪಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಅವರು ಪಕ್ಷದ
ಶಾಲು ಹೊದಿಸಿ ಕಾಂಗ್ರೆಸ್ಗೆ ಸೇರ್ಪಡೆ ಮಾಡಿದರು. ಪ್ರವೀಣ್ ಮುಂಡೋಡಿ ದ.ಕ.ಜಿಲ್ಲಾ ಯುವ ಜೆಡಿಎಸ್ ಉಪಾಧ್ಯಕ್ಷ, ಸುಳ್ಯ ತಾಲೂಕು ಜೆಡಿಎಸ್ ಉಪಾಧ್ಯಕ್ಷರಾಗಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸುಳ್ಯ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಮಮತಾ ಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಟಿ.ಎಂ.ಶಹೀದ್ ತೆಕ್ಕಿಲ್, ಧನಂಜಯ ಅಡ್ಪಂಗಾಯ ಮುಖಂಡರಾದ ನಿತ್ಯಾನಂದ ಮುಂಡೋಡಿ,ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಅಧ್ಯಕ್ಷ ಭರತ್ ಮುಂಡೋಡಿ, ಡಾ. ರಘು, ಡಿಸಿಸಿ ಉಪಾಧ್ಯಕ್ಷ ಜಯಪ್ರಕಾಶ್ ರೈ, ವಿಧಾನಸಭಾ ಅಭ್ಯರ್ಥಿ ಜಿ. ಕೃಷ್ಣಪ್ಪ, ಪ್ರಮುಖರಾದ ಇಸಾಕ್ ಹಾಜಿ ಪಾಜಪಳ್ಳ, ಸದಾನಂದ ಮಾವಜಿ, ಬೆಟ್ಟ ರಾಜಾರಾಮ್ ಭಟ್, ಮಹೇಶ್ ಕುಮಾರ್ ಕರಿಕ್ಕಳ, ಕಿರಣ್ ಬುಡ್ಲೆಗುತ್ತು , ವಿಜಯ್ ಕುಮಾರ್ ಸೊರಕೆ, ಶ್ರೆಯಾಂಶ್ ಕುಮಾರ್ ಶೆಟ್ಟಿಮೂಲೆ ಮತ್ತಿತರರು ಉಪಸ್ಥಿತರಿದ್ದರು..