ಸುಳ್ಯ:ಇತ್ತೀಚೆಗೆ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಚರ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ನ.2 ರಂದು ಭೂಮಿ ಭೂಜೆ ನಡೆಯಲಿದೆ.ನ.2 (ಬುಧವಾರ) ರಂದು ಪೂ.9.30ಕ್ಕೆ ಮನೆ ನಿರ್ಮಾಣಕ್ಕೆ ಭೂಮಿ ಪೂಜೆ, ಶಂಕುಸ್ಥಾಪನೆ ನೆರವೇರಲಿದೆ. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್,ಸುಳ್ಯ ಶಾಸಕರು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ.ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಮನೆ ನಿರ್ನಿಸಿ ಕೊಡುವುದಾಗಿ
ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗು ಬಿಜೆಪಿ ಮುಖಂಡರು ಭರವಸೆ ನೀಡಿದ್ದರು.