ಬೆಂಗಳೂರು: ಬಿಜೆಪಿ ಯುವಮೋರ್ಚಾ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ಗೆ ಆಶ್ರಯ ನೀಡಿದ ಆರೋಪದಲ್ಲಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.2022ರ ಜುಲೈ 26 ರಂದು ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ನಡೆಸುತ್ತಿದ್ದು ಪ್ರಕರಣದಲ್ಲಿ
ಇದುವರೆಗೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪೈಕಿ ಮುಸ್ತಫಾ ಪೈಚಾರ್ ಹತ್ಯೆಯ ಸಂಚು ರೂಪಿಸಿದ ಪ್ರಮುಖ ಆರೋಪಿಯಾಗಿದ್ದು, ಆತನಿಗೆ ಆಶ್ರಯ ನೀಡಿದ್ದ ಆರೋಪದ ಮೇರೆಗೆ ರಿಯಾಜ್ ಎಚ್.ವೈ. ಎಂಬಾತನನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಪ್ರಕರಣ ಸಂಬಂಧಿಸಿ ಇನ್ನೂ 7 ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಎನ್ಐಎ ತಿಳಿಸಿದೆ.