ಸುಳ್ಯ: ಕರ್ನಾಟಕ ಉಪಚುನಾವಣೆಯಲ್ಲಿ ಮೂರಕ್ಕೆ ಮೂರು ಸ್ಥಾನವನ್ನು ಗೆಲ್ಲುವುದರ ಮೂಲಕ ಕಾಂಗ್ರೆಸ್ ಮಹತ್ವದ ಸಾಧನೆ ಮಾಡಿದೆ ಎಂದುದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರವೀಣ ಪಿ ರೈ ಮರುವಂಜ ಹೇಳಿದ್ದಾರೆ.
ರಾಜ್ಯದ ಮಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗು ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ತನ್ನ ಐದು ಗ್ಯಾರಂಟಿಗಳನ್ನು ಶಿಸ್ತುಬದ್ಧವಾಗಿ ಕಾರ್ಯರೂಪಕ್ಕೆ ತಂದು ನಾಡಿನ ಜನತೆಗೆ ತನ್ನ ಮಾತಿನಂತೆ ನಡೆದುಕೊಂಡ ಕಾಂಗ್ರೆಸ್ ಪಕ್ಷವೇ ಉತ್ತಮವೆಂದು ಜನರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.