ಅಜ್ಜಾವರ: ಸುಳ್ಯ ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗಾಗಿ ಕೆಸರೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಅಜ್ಜಾವರ ಗ್ರಾಮದ ಕೊರಂಗುಬೈಲು ಗದ್ದೆಯಲ್ಲಿ ನಡೆದ ಕೆಸರೋತ್ಸವ ಕಾರ್ಯಕ್ರಮದಲ್ಲಿ ಪತ್ರಕರ್ತರಿಗಾಗಿ ಕೆಸರು ಗದ್ದೆಯಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ
ಗವರ್ನಿಂಗ್ ಫೆಕಲ್ಟಿ ಸದಸ್ಯರಾದ ಡಾ.ರೇವಂತ್ ಸೂಂತೋಡು ಉದ್ಘಾಟಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಶರೀಫ್ ಜಟ್ಟಿಪಳ್ಳ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಸುಳ್ಯ ಎಸ್ಐ ಸಂತೋಷ್.ಬಿ.ಪಿ ಶುಭ ಹಾರೈಸಿದರು. ನಿವೃತ್ತ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅಜ್ಜಾವರ,ಡಾ.ಶ್ರಮಿಕ ಸೂಂತೋಡು,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಪ್ರತಾಪ ಯುವಕ ಮಂಡಲದ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ಅಜ್ಜಾವರ,ಸ್ವರ್ಣಂ ಜ್ಯುವೆಲ್ಸ್ನ ಪಾಲುದಾರರಾದ ಪ್ರವೀಣ್ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು.
ಪ್ರೆಸ್ ಕ್ಲಬ್ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ,ಹರೀಶ್ ಬಂಟ್ವಾಳ್,ಕೃಷ್ಣ ಬೆಟ್ಟ ಮತ್ತಿತರರು ಉಪಸ್ಥಿತರಿದ್ದರು.ಯಶ್ವಿತ್ ಕಾಳಂಮನೆ ಸ್ವಾಗತಿಸಿ, ಈಶ್ವರ ವಾರಣಾಸಿ ವಂದಿಸಿದರು.ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.








































