ಅರಂತೋಡು:ಶಾಲಾ ಶಿಕ್ಷಣ ಇಲಾಖೆ ಸುಳ್ಯ ದ.ಕ.ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಆರಂತೋಡು ಶಾಲೆಯ ಮೈದಾನದಲ್ಲಿ ನಡೆಯಿತು. ಆರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಕ್ರೀಡಾ ಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷ ಹರೀಶ್ ಉಳುವಾರು ವಹಿಸಿದ್ದರು. ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಮಾಲಿನಿ, ಪುಷ್ಪಾಧರ, ಸುಳ್ಯ ತಾಲ್ಲೂಕು ದೈಹಿಕ ಶಿಕ್ಷಕ ಪರಿವಿಕ್ಷಕ ಅಧಿಕಾರಿ ಸೂಫಿ ಪೆರಾಜೆ, ನಿವೃತ ಮುಖ್ಯ ಶಿಕ್ಷಕ ಎ.ವಿ.ತೀರ್ಥರಾಮ, ಹಳೆ ವಿದ್ಯಾರ್ಥಿ ಸಂಘ ದ ಅಧ್ಯಕ್ಷ ಸತೀಶ್ ನಾಯ್ಕ್,ಗಾಂಧಿನಗರ ಶಾಲಾ ಶಿಕ್ಷಕಿ ಭವಾನಿ, ಮುಖ್ಯ ಶಿಕ್ಷಕ ದೇವರಾಜ್, ದೈಹಿಕ ಶಿಕ್ಷಕ ಧನಂಜಯ ಮೆರ್ಕಜೆ, ಆರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಆಶ್ರಫ್ ಗುಂಡಿ, ಶಾಲಾ ದೈಹಿಕ ಶಿಕ್ಷಕಿ ಸರಸ್ವತಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಷನ್ ಕಾರ್ಯದರ್ಶಿ ಜುಬೈರ್ , ಮೊದಲಾದವರು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ಬನ ಸ್ವಾಗತಿಸಿ ಶಿಕ್ಷಕಿ ಭಾನುಮತಿ ಕಾರ್ಯಕ್ರಮ ನಿರೂಪಿಸಿದರು.ತಾಲೂಕಿನ ವಿವಿಧ ಶಾಲೆಯ ಮಕ್ಕಳು ತ್ರೋಬಾಲ್ ಪದ್ಯ ಕೂಟದಲ್ಲಿ ಭಾಗವಹಿಸಿದ್ದರು.









