ಅಹಮ್ಮದಾಬಾದ್:ಪ್ರೊ ಕಬಡ್ಡಿ ಲೀಗ್ ಪಂದ್ಯಾಟದ ಇಂದಿನ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡಕ್ಕೆ ಭರ್ಜರಿ ಜಯ. ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡವು 33-28 ಅಂತರದಲ್ಲಿ ಗುಜರಾತ್ ಜೈಂಟ್ಸ್ ತಂಡವನ್ನು ಪರಾಭವಗೊಳಿಸಿತು. 4 ಪಂದ್ಯ ಆಡಿದ ಗುಜರಾತ್ ಜೈಂಟ್ಸ್ ತಂಡಕ್ಕೆ ಮೊದಲ ಸೋಲಾಯಿತು. ಇಂದಿನ
ಮೊದಲ ಪಂದ್ಯದಲ್ಲಿ ಬೆಂಗಾಲ್ ವಾರಿಯರ್ಸ್ ತಂಡ ಹಾಗೂ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡಗಳ ಮಧ್ಯೆ ನಡೆದ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯವಾಯಿತು. ಪೂರ್ಣ ಅವಧಿ ಮುಗಿದಾಗ ಎರಡೂ ತಂಡಗಳು ತಲಾ 28 ಅಂಕಗಳನ್ನು ಪಡೆದು ಡ್ರಾದಲ್ಲಿ ಅಂತ್ಯಗೊಂಡಿತು.









