*ರತ್ನಾಕರ ಸುಬ್ರಹ್ಮಣ್ಯ.
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್ ಎಸ್ ಪಿಯು ಕಾಲೇಜಿನಲ್ಲಿ ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸಿ ಸೋಮವಾರ ನಿವೃತ್ತಾಗಲಿರುವ ಕನ್ನಡ ಉಪನ್ಯಾಸಕ ಕುಸುಮಾಧರ ಕಮಿಲ ಅವರು ಬೆಳಗ್ಗೆ ಕಾಲೇಜಿಗೆ ಆಗಮಿಸುವ ಸಂದರ್ಭ ವಿದ್ಯಾರ್ಥಿಗಳು ಗುರುಗಳಿಂದ ಆಶೀರ್ವಾದ ಪಡೆದರು. ವಿದ್ಯಾರ್ಥಿಗಳು ಸಾಲಾಗಿ ನಿಂತು ಗುರುಗಳ ಮೇಲೆ ಪುಷ್ಪವೃಷ್ಠಿ ಮಾಡಿ ಶಿಷ್ಯರು ಬರಮಾಡಿಕೊಂಡು ಆಶೀರ್ವಾದ ಪಡೆದರು. ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹಾಗು ಇತರ ಉಪನ್ಯಾಸಕರು ಉಪಸ್ಥಿತರಿದ್ದರು.