ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 2025ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಪ್ರಾಜೆಕ್ಟ್ ಎಕ್ಸ್ಪೋ2025 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಪಾಲಿಟೆಕ್ನಿಕ್ ಪ್ರಾಂಶುಪಾಲ ಅಣ್ಣಯ್ಯ ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಜಗತ್ತಿನಲ್ಲಿ
ಪ್ರಾಜೆಕ್ಟ್ ತಯಾರುಮಾಡುವುದರಿಂದ ಕೌಶಲ್ಯವು ಉತ್ತೇಜನಗೊಳ್ಳುತ್ತದೆ ಎಂದು ಹೇಳಿ ಶುಭ ಹಾರೈಸಿದರು. ಕಾಲೇಜಿನ ಸಿ.ಇ.ಒ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಮತ್ತು ವಿ.ಟಿ.ಯು.ನ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ. ಉಜ್ವಲ್ ಯು.ಜೆ. ಮಾತನಾಡಿ ಹೊಸ ತಂತ್ರಜ್ಞಾನಕ್ಕೆ ವಿದ್ಯಾರ್ಥಿಗಳು ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ತೆರೆದುಕೊಳ್ಳಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ ಶುಭ ಹಾರೈಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ. ರಾಘವೇಂದ್ರ ಬಿ. ಕಾಮತ್ ವಂದಿಸಿದರು. ವಿದ್ಯಾರ್ಥಿಗಳಾದ ಲಿಖಿತ್ ಪಿ.ಪಿ. ಮತ್ತು ವಾಗ್ದೇವಿ ಎಂ.ಡಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ನಾಲ್ಕು ಇಂಜಿನಿಯರಿಂಗ್ ವಿಭಾಗಗಳಿಂದ ಒಟ್ಟು 50ಕ್ಕಿಂತಲೂ ಅಧಿಕ ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡವು. ಉಪಪ್ರಾಂಶುಪಾಲರು ಮತ್ತು ಗಣಿತ ವಿಭಾಗದ ಮುಖ್ಯಸ್ಥರು ಡಾ. ಶ್ರೀಧರ್ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಲ್ಲಾ ಡೀನ್ಗಳು, ವಿದ್ಯಾರ್ಥಿ ಕ್ಷೇಮಾಧಿಕಾರಿ, ಕಾಲೇಜಿನ ಆಡಳಿತಾಧಿಕಾರಿ, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.









