ಸುಳ್ಯ:ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ಶಾರದ ಮಹಿಳಾ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಶ್ರೀ ಶಾರದ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ವಹಿಸಿದರು. ಉದ್ಘಾಟನೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ರವರು ನೆರವೇರಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ದಯಾಮಣಿ. ಕೆ. ಸ್ವಾಗತಿಸಿ, ಸಮಾಜಶಾಸ್ತ್ರ ಉಪನ್ಯಾಸಕರಾದ ಬಾಲಕೃಷ್ಣ. ಕೆ. ವಂದಿಸಿದರು. ವೇದಿಕೆಯಲ್ಲಿ ತಾಲೂಕು ಕ್ರೀಡಾ ಸಂಯೋಜಕರಾದ ಶಾಂತಿ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯನಿ ಭಾರತಿ. ಪಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ. ಕೆ ಪಂದ್ಯಾಟವನ್ನು ಸಂಘಟಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ. ಎನ್ ಕಾರ್ಯಕ್ರಮವನ್ನು ನಿರೂಪಿಸಿದರು.









