ಸುಳ್ಯ:ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಹುಡುಗಿಯರ ವಿಭಾಗದಲ್ಲಿ

ರೋಟರಿ ಪದವಿಪೂರ್ವ ಕಾಲೇಜು ಪ್ರಥಮ ಹಾಗೂ ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಹುಡುಗರ ವಿಭಾಗದಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಪ್ರಥಮ ಹಾಗೂ ರೋಟರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿಜೇತರನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋದಕ ಭೋದಕೇತರ ವೃಂದದವರು ಅಭಿನಂದಿಸಿದ್ದಾರೆ









