ಸುಳ್ಯ: ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಜಂಟಿ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ದೀಪ ಪ್ರಜ್ವಲಿಸುವುದರ ಮೂಲಕ ದ. ಕ. ಗೌಡ ವಿದ್ಯಾ ಸಂಘದ
ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ಅವರು ನೆರವೇರಿಸಿ ಭಾರತ ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ಮುಂದುವರಿದರೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗಳು ಕಡಿಮೆಯಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಭಾರತದ ಗರಿಮೆಯನ್ನು ಹೆಚ್ಚಿಸಬೇಕೆಂದು ಕರೆ ನೀಡಿದರು. ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಭಾವತಿ. ಎಸ್. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ದಯಾಮಣಿ ಕೆ. ಸ್ವಾಗತಿಸಿ ದೈಹಿಕ ಶಿಕ್ಷಣ ಉಪನ್ಯಾಸಕರಾದ ಬಾಲಚಂದ್ರ ಅವರು ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕರಾದ ಪ್ರಸನ್ನ ಎನ್ ಎಚ್. ಕಾರ್ಯಕ್ರಮ ನಿರೂಪಿಸಿದರು.