ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವತಿಯಿಂದ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಬಾಲಕರ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದು, ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ
ದ್ವಿತೀಯ ಸ್ಥಾನ ಪಡೆದಿದೆ.ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ತಾಲೂಕು ತಂಡಕ್ಕೆ ಕಾಲೇಜಿನ ಮಹಮ್ಮದ್ ನಿಯಾಜ್, ಅಹಮ್ಮದ್ ಮಹಶೂಕ್, ಅಬ್ದುಲ್ ರಿಫಾತ್, ಅಜಯ್ ಕೆ.ಸಿ ಆಯ್ಕೆಯಾಗುದ್ದಾರೆ. ತಾಲೂಕು ಮಟ್ಟದ ಪಂದ್ಯದಲ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಮಹಮ್ಮದ್ ನಿಯಾಜ್ ತಮ್ಮದಾಗಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಶ್ರೀಮತಿ ಡಾ.ಯಶೋದಾ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.









