ಸುಳ್ಯ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಸುಳ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ
ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ
ರೋಟರಿ ಪದವಿ ಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರ ಹೊಮ್ಮಿತು. ಬಾಲಕರ ವಿಭಾಗದಲ್ಲಿ ಶ್ರೇಯಸ್ ಎಸ್. ಹಾಗೂ ಮಹಮ್ಮದ್ ಸೈಫ್ ನೇತೃತ್ವದ ರೋಟರಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ ಅರಂತೋಡು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.


ರೋಟರಿ ಪ.ಪೂ.ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ
ಬಾಲಕಿಯರ ವಿಭಾಗದಲ್ಲಿ ರೋಟರಿ ಪದವಿಪೂರ್ವ ಕಾಲೇಜು ಪ್ರಥಮ ಸ್ಥಾನ ಪಡೆದರೆ ಶ್ರೀ ಶಾರದಾ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು. ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ. ಕೆ ವಿಜೇತರಿಗೆ ಬಹುಮಾನ ವಿತರಿಸಿದರು.

ಶ್ರೀ ಶಾರದಾ ಪ.ಪೂ.ಕಾಲೇಜು ತಂಡ
ರೋಟರಿ ಪ.ಪೂ.ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಂಗನಾಥ್, ತೀರ್ಪುಗಾರರಾದ ಯಜ್ಞೇಶ್ ಕಾನತ್ತಿಲ ಉಪಸ್ಥಿತರಿದ್ದರು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ದಾಮೋದರ ಎನ್ ಕಾರ್ಯಕ್ರಮ ನಿರೂಪಿಸಿದರು.












