ಸುಳ್ಯ: ಪದವಿಪೂರ್ವ ಪರೀಕ್ಷೆಗಳು ಮಾ.1ರಿಂದ ಆರಂಭಗೊಳ್ಳಲಿದೆ. ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ಪೂರ್ತಿಯಾಗಿದೆ. ಮಾ.1ರಿಂದ 22ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಶುಕ್ರವಾರ ಕನ್ನಡ ಪರೀಕ್ಷೆ ನಡೆಯಲಿದೆ. ಪೂ.10.15ರಿಂದ 1.30 ರವರೆಗೆ ಪರೀಕ್ಷೆ ನಡೆಯಲಿದೆ. ಸುಳ್ಯದಲ್ಲಿ ಎರಡು ಪರೀಕ್ಷಾ ಕೇಂದ್ರಗಳಿವೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಗಾಂಧಿನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ
ಪರೀಕ್ಷೆಗಳು ನಡೆಯಲಿದೆ. ಈ. ಎರಡು ಕೇಂದ್ರಗಳಲ್ಲಿ ಒಟ್ಟು 1209 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 651 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಅಮರ ಜ್ಯೋತಿ ಪದವಿ ಪೂರ್ವ ಕಾಲೇಜು, ಶ್ರೀ ಶಾರದಾ ಪದವಿ ಪೂರ್ವ ಕಾಲೇಜು, ಗಾಂಧಿನಗರ ಪದವಿ ಪೂರ್ವ ಕಾಲೇಜು, ಸರಕಾರಿ ಪದವಿ ಪೂರ್ವ ಕಾಲೇಜು ಐವರ್ನಾಡು, ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ಳಾರೆ, ಸಂಪಾಜೆ ಪದವಿ ಪೂರ್ವ ಕಾಲೇಜು ಹೀಗೆ 7 ಕಾಲೇಜುಗಳ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಗಾಂಧಿನಗರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 558 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ, ರೋಟರಿ ಪದವಿ ಪೂರ್ವ ಕಾಲೇಜು ಹಾಗೂ ಅರಂತೋಡು ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಸುಬ್ರಹ್ಮಣ್ಯ ಕೇಂದ್ರ:
ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 488 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜು, ಪಂಜ ಸರಕಾರಿ ಪದವಿ ಪೂರ್ವ ಕಾಲೇಜು, ಎಸ್ಎಸ್ಪಿಯು ಕಾಲೇಜು, ಸುಬ್ರಹ್ಮಣ್ಯ ಕುಮಾರಸ್ವಾಮಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ಪೂರ್ತಿಯಾಗಿದೆ.