ಸುಳ್ಯ:ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ರೋಟರಿ ವಿದ್ಯಾಸಂಸ್ಥೆ ಶೇ.100 ಫಲಿತಾಂಶ ದಾಖಲಿಸಿದೆ.ವಿಜ್ಞಾನ ವಿಭಾಗದಿಂದ ಪರೀಕ್ಷೆ ಬರೆದ 44 ಹಾಗೂ ವಾಣಿಜ್ಯ ವಿಭಾಗದಿಂದ ಪರೀಕ್ಷೆ ಬರೆದ 27 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100 ಫಲಿತಾಂಶ ಬಂದಿದೆ.ವಿಜ್ಞಾನ ವಿಭಾಗದಲ್ಲಿ
11 ಅತ್ಯುನ್ನತ ಶ್ರೇಣಿ, 33 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ನಿಖಿತ ಎಚ್.ಎಲ್.580 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 14 ಅತ್ಯುನ್ನತ ಶ್ರೇಣಿ, 13 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪೃಥ್ವಿರಾಜ್ ಎ.ಎಚ್.570 ಅಂಕ ಪಡೆದಿದ್ದಾರೆ.
ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಕಲಾವಿಭಾಗ ಶೇ. 100 ಮತ್ತು ವಾಣಿಜ್ಯ ಮತ್ತು ವಿಜ್ಞಾನ ವಿಭಾಗ ಶೇ.99 ಫಲಿತಾಂಶ ಪಡೆದುಕೊಂಡಿದೆ.32 ಡಿಸ್ಟಿಂಕ್ಷನ್ ಮತ್ತು 123 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಪಂಜ:
ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿನ ಕಲಾ ವಿಭಾಗ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ದಾಖಲಿಸಿದೆ.
ವಾಣಿಜ್ಯ ವಿಭಾಗದಲ್ಲಿ 11ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 7 ಹುಡುಗರು ಮತ್ತು 4 ಹುಡುಗಿಯರು ಪರೀಕ್ಷೆ ಬರೆದಿರುತ್ತಾರೆ.
ಕಲಾ ವಿಭಾಗದಲ್ಲಿ 7 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 6ಹುಡುಗರು ಮತ್ತು 1 ಹುಡುಗಿಯರು ಪರೀಕ್ಷೆ ಬರೆದು ಎಲ್ಲರೂ ಉತ್ತೀರ್ಣರಾಗಿದ್ದಾರೆ.
ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯ:
ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಬಂದಿದೆ.
ಪರೀಕ್ಷೆ ಎದುರಿಸಿದ 45 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಯಾಗಿದ್ದು, ಶೇ 98 ಫಲಿತಾಂಶ ದಾಖಲಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 15 ಮತ್ತು ವಾಣಿಜ್ಯ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯನ್ನು ಪಡೆದಿರುತ್ತಾರೆ.
ವಿಜ್ಞಾನ ವಿಭಾಗದಲ್ಲಿ ಸಾತ್ವಿಕ್ ಯಚ್ ಯಸ್ 592 ಹಾಗೂ ತೃಪ್ತಾ ಎಂ ಟಿ 579 ಅಂಕ,ವಾಣಿಜ್ಯ ವಿಭಾಗದಲ್ಲಿ ಶ್ರೇಯಾ 591 ಅಂಕ ಮತ್ತು ದಿಶಾ 590 ಅಂಕ ಪಡೆದಿದ್ದಾರೆ