ಸುಳ್ಯ:2026 ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರಾಜ್ಯ ಟಾಪ್ಪರ್ಗಳನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮ
ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಲಾ ವಿಭಾಗದಲ್ಲಿ ರಾಜ್ಯದಲ್ಲಿ ದ್ವಿತೀಯ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನಿಯಾದ ಸುಳ್ಯದ

ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ಫಾತಿಮತ್ ಶಹ್ಲಾ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ರಾಜೇಶ್ವರಿ, ಎಚ್. ಎಚ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ನವೀನ್ ಶೆಟ್ಟಿ, ಸಂಘದ ಪದಾಧಿಕಾರಿಗಳು, ಶಾರದಾ ಕಾಲೇಜಿನ ಪ್ರಾಂಶುಪಾಲರಾದ ದಯಾಮಣಿ ಕೆ. ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದರು.
















