ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತದ ಮಾಜಿ ಬ್ಯಾಡ್ಮಿಂಟನ್ ಆಟಗಾರ ಮತ್ತು ಭಾರತೀಯ ಬ್ಯಾಡ್ಮಿಂಟನ್ ತಂಡದ ಹಾಲಿ ತರಬೇತುದಾರ ಪುಲ್ಲೇಲ ಗೋಪಿಚಂದ್ ಮಂಗಳವಾರ ಕುಟುಂಬ ಸಮೇತರಾಗಿ ಭೇಟಿ ನೀಡಿದರು.ಆರಂಭದಲ್ಲಿ
ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ಶ್ರೀ ದೇವರ ದರುಶನ ಪಡೆದು ಸೇವಾಧಿಗಳನ್ನು ನೆರವೇರಿಸಿದರು.ಈ ಸಂದರ್ಭ ಶ್ರೀ ದೇವಳದ ಅರ್ಚಕರು ಗೋಪಿಚಂದ್ ಅವರಿಗೆ ಶಾಲು ಹೊದಿಸಿ ಪ್ರಸಾದ ನೀಡಿ ಹರಸಿದರು.ಬಳಿಕ ಅವರು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.ಇವರನ್ನು ಶ್ರೀ ದೇವಳದ ಶಿಷ್ಠಾಚಾರ ವಿಭಾಗದ ಪ್ರಮೋದ್ ಕುಮಾರ್.ಎಸ್ ಸ್ವಾಗತಿಸಿದರು.ಈ ಸಂದರ್ಭ ವಿಶ್ರಾಂತ ಶಿಷ್ಠಾಚಾರ ಅಧಿಕಾರಿ ಎ.ವೆಂಕಟ್ರಾಜ್ ಉಪಸ್ಥಿತರಿದ್ದರು.








