ಸುಳ್ಯ; ತಾಲೂಕು ಸಾರ್ವಜನಿಕ ಆಸ್ಪತ್ರೆ ಸುಳ್ಯ,ರೋಟರಿ ಕ್ಲಬ್ ಸುಳ್ಯ ಮತ್ತು ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಮಾ. 3ರಂದು ನಡೆಯುತಿದೆ. ಸುಳ್ಯ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಆನಂದ ಖಂಡಿಗರ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಪಲ್ಸ್ ಪೋಲಿಯೊ
ಚೆಯರ್ಮೆನ್ ಕೆ. ಸೀತಾರಾಮ ರೈ ಸವಣೂರು ಸ್ವಾಗತಿಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಸುಳ್ಯ ತಹಶೀಲ್ದಾರ್ ಎನ್. ಮಂಜುನಾಥ್, ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್, ಇನ್ನರ್ ವ್ಹೀಲ್ ಅಧ್ಯಕ್ಷೆ ಸವಿತಾ ನಾರ್ಕೋಡು, ಸುಳ್ಯ ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪ ಸಭಾಪತಿ ಮುಸ್ತಫಾ ಕೆ.ಎಂ, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಎಚ್.ಸುಧಾಕರ್, ಸುಳ್ಯ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ವೈದ್ಯಾಧಿಕಾರಿ ಡಾ. ಕರುಣಾಕರ ಕೆ.ವಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯರಾದ ಆಗ್ರೋ ರಾಮಚಂದ್ರ, ಪ್ರಭಾಕರನ್ ನಾಯರ್, ಗಣೇಶ್ ಭಟ್ ಮಧುಸೂದನ್ ಮತ್ತಿತರರು,ರೋಟರಿ ಸುಳ್ಯ ಸಿಟಿ ಅಧ್ಯಕ್ಷ ಗಿರೀಶ್ ನಾರ್ಕೋಡು ವಂದಿಸಿದರು.







