ಕಾಣಿಯೂರು:ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ನಡೆದ ಶ್ರೀ ವಿಷ್ಣುಮೂರ್ತಿ ದೈವದ 57ನೇ ವರ್ಷದ ಒತ್ತೆಕೋಲ ಸಂಪನ್ನಗೊಂಡಿತು.ಎ.4ರಂದು ಪ್ರಾತಃಕಾಲ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆದು ವಿಷ್ಣುಮೂರ್ತಿ ದೈವ
ಪ್ರಸಾದ ನೀಡಿ ಭಕ್ತರನ್ನು ಹರಸಿತು. ಬಳಿಕ ಮಾರಿಕಳ, ಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆಯಾಗಿ ಹರಕೆ ಒಪ್ಪಿಸುವುದರೊಂದಿಗೆ ಎರಡು ದಿನಗಳ ಕಾಲ ನಡೆದ ಒತ್ತೆಕೋಲ ಸಮಾಪನಗೊಂಡಿತು. ಎ.2 ರಂದು ಹಸಿರು ಕಾಣಿಕೆ ಸಮರ್ಪಣೆಯೊಂದಿಗೆ ಒತ್ತೆಕೋಲ ಆರಂಭಗೊಂಡಿತು. ಎ.3ರಂದು ಬೆಳಿಗ್ಗೆ ಸ್ಥಳ ಶುದ್ದೀಕರಣ, ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಿತು. ಸಂಜೆ ವಿಷ್ಣುಪುರ ದೈವಸ್ಥಾನದಿಂದ

ಭಂಡಾರ ತೆಗೆಯುವುದು.ಬಳಿಕ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ಬಳಿಕ ಭಜನಾ ಕಾರ್ಯಕ್ರಮ, ಅನ್ನ ಸಂತರ್ಪಣೆ ನಡೆಯಿತು.ರಾತ್ರಿ ಶ್ರೀ ವಿಷ್ಣುಮೂರ್ತಿ ದೈವದ ಕುಳ್ಚಾಟ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ
ರಾತ್ರಿ ಕು. ವೈಭವಿ ವಾಸು, ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಭರತನಾಟ್ಯ ಕಾರ್ಯಕ್ರಮ, ಶ್ರೀ ಸಾಯಿ ಕಲಾ ಯಕ್ಷ ಬಳಗ ಡಾ. ಶಿವರಾಮ ಕಾರಂತ ಬಾಲವನ ಪುತ್ತೂರು ಯಕ್ಷಗಾನ ತಂಡ ಇವರಿಂದ
ಯಕ್ಷಗಾನ ಬಯಲಾಟ ‘ಶ್ರೀನಿವಾಸ ಕಲ್ಯಾಣ’ ನಡೆಯಿತು.

ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಜತೆ ಕಾರ್ಯದರ್ಶಿ ಮಿಥುನ್ ಪೈಕ, ಮೊಕ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ಧನ ಆಚಾರ್ಯ, ಕೃಷ್ಣ ಆಚಾರ್ಯ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಉತ್ಸವ ಸಮಿತಿ ಸದಸ್ಯರು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.








