ಕಾಣಿಯೂರು:ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ 55ನೇ ವರ್ಷದ ಒತ್ತೆಕೋಲ ಭಕ್ತಿ ಸಂಭ್ರಮದಲ್ಲಿ ನಡೆಯಿತು.ಎ.3ರಂದು ಸಂಜೆ ವಿಷ್ಣುಪುರ ದೈವಸ್ಥಾನದಿಂದ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಸಂಜೆ
ಮೇಲೇರಿಗೆ ಅಗ್ನಿ ಸ್ಪರ್ಶ ನೀಡುವ ಕಾರ್ಯಕ್ರಮ ನಡೆಯಿತು. ಸಂಜೆ 7ರಿಂದ ಭಜನಾ ಕಾರ್ಯಕ್ರಮ ನಡೆಯಿತು.ರಾತ್ರಿ 10ರಿಂದ ವಿಷ್ಣುಮೂರ್ತಿ ದೈವದ ಕುಳ್ಚಾಟ ನಡೆಯಿತು. ಬಳಿಕ ತುಳು ಹಾಸ್ಯಮಯ ನಾಟಕ ‘ಅಮ್ಮೆರ್’ ಪ್ರದರ್ಶನಗೊಂಡಿತು. ಎ.4ರಂದು ಪ್ರಾತಃಕಾಲ 5ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ ನಡೆಯಿತು.ನೆರೆದ ಭಕ್ತರನ್ನು ಹರಸಿತು. ನೂರಾರು ಮಂದಿ ವಿಷ್ಣುಮೂರ್ತಿ ದೈವದ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಮಾರಿಕಳ ನಡೆದು, ಗುಳಿಗ ದೈವದ ಕೋಲ, ಬಳಿಕ ಪ್ರಸಾದ ವಿತರಣೆ, ಹರಕೆ ಸಮರ್ಪಣೆಯೊಂದಿಗೆ ಒತ್ತೆಕೋಲ ಸಂಪನ್ನಗೊಂಡಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರರಾದ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಜತೆ ಕಾರ್ಯದರ್ಶಿ ಮಿಥುನ್ ಪೈಕ ಹಾಗೂ ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.