ಕಾಣಿಯೂರು: ಪುಣ್ಚತ್ತಾರು ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪುಣ್ಚತ್ತಾರಿನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಯ್ದ ಸ್ಥಳೀಯ ಆಟಗಾರರ ನಿಗದಿತ 10 ತಂಡಗಳ ಪ್ರೋ ಮಾದರಿಯ ವಾಲಿಬಾಲ್ ಪಂದ್ಯಾಟ ನಡೆಯಿತು.ಕಾಣಿಯೂರು ಶ್ರೀ ರಾಮತೀರ್ಥ ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್ ಉದ್ಘಾಟಿಸಿದರು. ಶ್ರೀ ಹರಿ ಭಜನಾ ಮಂಡಳಿಯ
ಗೌರವಾಧ್ಯಕ್ಷ ನಾರಾಯಣ ಗೌಡ ಇಡ್ಯಡ್ಕ ಅಧ್ಯಕ್ಷತೆ ವಹಿಸಿದ್ದರು.
ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಪೂರ್ತಿ ದೈವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು
ಪಂಜ ವಲಯ ದೋಳ್ಪಾಡಿ ಗಸ್ತು ಅರಣ್ಯಾಧಿಕಾರಿ ಮನೋಹರ್ ಪಿ.ಬಿ, ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಧ್ಯಕ್ಷ ರಾಮಣ್ಣ ಗೌಡ ಮೂಡೈಮಜಲು, ಪೈಕ ಕರಿಮಜಲು ಗ್ರಾಮ ದೈವಸ್ಥಾನದ ಅನುವಂಶಿಕ ಮೊಕ್ತೇಸರ ಪುಟ್ಟಣ್ಣ ಗೌಡ ಪೈಕ ಶುಭಹಾರೈಸಿದರು.ಪುಣ್ಚತ್ತಾರು

ಶ್ರೀ ಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ನ ಗೌರವಾಧ್ಯಕ್ಷ ಮೋಹನ ಗೌಡ ಇಡ್ಯಡ್ಕ,ಸ್ಥಾಪಕಾಧ್ಯಕ್ಷ ರಾಧಾಕೃಷ್ಣ ಪೈಕ, ಅಧ್ಯಕ್ಷ ಹರೀಶ್ ಪೈಕ ಕಟೀಲ್, ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಪೈಕ, ಕೋಶಾಧಿಕಾರಿ ಮಾಧವ ಕಲ್ಪಡ, ಉಪ ಕಾರ್ಯದರ್ಶಿ ಮಿಥುನ್ ಪೈಕ ಮತ್ತಿತರರು ಉಪಸ್ಥಿತರಿದ್ದರು.
































